ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2021ರ ಮೊದಲ ದಿನದಿಂದಲೇ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ

ನವದೆಹಲಿ: ಹೊಸ ವರ್ಷದ ಮೊದಲ ದಿನದಿಂದಲೇ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದಿದೆ. ಈ ನಿಟ್ಟಿನಲ್ಲಿ ಮೊದಲು 2017ರ ಡಿಸೆಂಬರ್‌ 1ರಿಂದ ಮಾರಾಟವಾಗುವ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್‌ಟ್ಯಾಗ್‌ ಕಡ್ಡಾಯ ಮಾಡಲಾಗಿತ್ತು. ಆದರೆ 2017ಕ್ಕಿಂತ ಮೊದಲು ಮಾರಾಟವಾಗಿದ್ದ ವಾಹನಗಳಿಗೆ ವಿನಾಯಿತಿ ನೀಡಲಾಗಿತ್ತು. ಈಗ ಈ ವಿನಾಯಿತಿಯನ್ನು ತೆಗೆಯಲಾಗಿದ್ದು, ಎಲ್ಲ 4 ಚಕ್ರದ ವಾಹನಗಳು ಕಡ್ಡಾಯವಾಗಿ ಫಾಸ್ಟ್‌ಟ್ಯಾಗ್‌ ಅಳವಡಿಸಿರಬೇಕೆಂದು ಸರ್ಕಾರ ಸೂಚಿಸಿದೆ.

ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ಟ್ರಾಫಿಕ್ ಸಮಸ್ಯೆ ತಡೆಗಟ್ಟಲು ಕೇಂದ್ರ ಸರ್ಕಾರ ಫಾಸ್ಟ್ ಟ್ಯಾಗ್ ಸೌಲಭ್ಯವನ್ನು ಜಾರಿಗೆ ತಂದಿದೆ. ಫಾಸ್ಟ್ ಟ್ಯಾಗ್ ಪ್ರಿಪೇಯ್ಡ್ ಟ್ಯಾಗ್ ಸೌಲಭ್ಯವಾಗಿದ್ದು, ಟೋಲ್ ಶುಲ್ಕವನ್ನು ನಗದು ರಹಿತವಾಗಿ ಪಾವತಿಸಬಹುದಾಗಿದೆ.

Edited By : Vijay Kumar
PublicNext

PublicNext

08/11/2020 05:17 pm

Cinque Terre

44.67 K

Cinque Terre

2

ಸಂಬಂಧಿತ ಸುದ್ದಿ