ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರದ ನಿರ್ಧಾರ ಹಿಂಪಡೆಯಬೇಕೆಂದು ಒತ್ತಾಯಿಸಿ ಡಿ.5 ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ.
ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿರ್ಧಾರ ಖಂಡಿಸಿ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಇನ್ನು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಾಪಸ್ ಗೆ ರಾಜ್ಯ ಸರ್ಕಾರಕ್ಕೆ ನವೆಂಬರ್ 27ರವರೆಗೆ ಗಡುವು ನೀಡಿದೆ.
ನ.27ರೊಳಗೆ ನಿರ್ಧಾರ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ಫಿಕ್ಸ್.
PublicNext
17/11/2020 12:55 pm