ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗ್ರಾ.ಪಂ ಚುನಾವಣೆ ದಿನಾಂಕ ಪ್ರಕಟ : ಇಂದಿನಿಂದ ನೀತಿ ಸಂಹಿತೆ ಜಾರಿ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಸೋಮವಾರ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಿದ್ದು, ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದ ಡಿ.31ರವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

ಮೊದಲ ಹಂತದ ಚುನಾವಣೆ ಡಿ.22ರಂದು ಹಾಗೂ ಎರಡನೇ ಹಂತದ ಚುನಾವಣೆ ಡಿ.27ಕ್ಕೆ ನಿಗದಿಯಾಗಿದೆ.

ಡಿ.30ರಂದು ಫಲಿತಾಂಶ ಹೊರಬೀಳಲಿದೆ.

ಈ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಎಲ್ಲ ಹೊಸ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆಗೆ ಬ್ರೇಕ್ ಬೀಳಲಿದೆ.

ಸುಮಾರು 5800 ಗ್ರಾಮ ಪಂಚಾಯಿತಿಗಳ 85000 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Edited By : Nirmala Aralikatti
PublicNext

PublicNext

30/11/2020 12:26 pm

Cinque Terre

67.88 K

Cinque Terre

1