ಬಳ್ಳಾರಿ: ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರನ್ನು ಅಧಿಕಾರ ವಹಿಸಿಕೊಂಡ ಹತ್ತೇ ದಿನದಲ್ಲೇ ವರ್ಗಾವಣೆ ಮಾಡಲಾಗಿತ್ತು. ಈ ಸಂಗತಿ ರಾಜ್ಯದ ಗಮನ ಸೆಳೆದಿತ್ತು. ಆದರೆ ಅವಧಿ ಪೂರ್ವ ವರ್ಗಾವಣೆ ಮಾಡಿದ್ದರಿಂದ ಅವರು ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದಿಂದ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದು ಮುಂದುವರೆದಿದ್ದಾರೆ.
ಐಎಎಸ್ ಅಧಿಕಾರಿಯಾಗಿರುವ ಗೆಹ್ಲೋಟ್ ಅವರ ಬಿಗಿ ಆಡಳಿತದಿಂದ ಪಾಲಿಕೆಯಲ್ಲಿ ತಮ್ಮ ಕೈ ಚಳಕ ನಡೆಯದ ವ್ಯಕ್ತಿಗಳು ಇವರ ವರ್ಗಾವಣೆಗೆ ಪ್ರಯತ್ನ ಮಾಡಿರಬಹುದು. ಜೊತೆಗೆ ಈ ಹುದ್ದೆಗೆ ಬರಲು ಪ್ರಯತ್ನಿಸಿದವರು ಲಂಚ ನೀಡಿ ಗೆಹ್ಲೋಟ್ ಅವರನ್ನು ವರ್ಗಾವಣೆ ಮಾಡಿಸಲು ಮುಂದಾಗಿರಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ.
ಇದಕ್ಕೂ ಮುಂಚೆ ಪಾಲಿಕೆ ಆಯುಕ್ತೆಯಾಗಿದ್ದ ತುಷಾರಮಣಿ ಅವರು ಸಹ ಆರಂಭದಲ್ಲಿ ತುಂಬಾ ಕಟ್ಟುನಿಟ್ಟಾದ ಕಾರಣ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಅವರೂ ಸಹ ಆಡಳಿತಾತ್ಮಕ ನ್ಯಾಯಾಲಯದ ಮೊರೆ ಹೋಗಿ ತಮ್ಮ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು.
PublicNext
03/12/2020 08:18 am