ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವರ್ತೂರು ಕೋಡಿ ವೃತ್ತಕ್ಕೆ ಮಧುಕರ್ ಶೆಟ್ಟಿ ಹೆಸರನ್ನು ಇಡಲು ಸರ್ಕಾರ ನಕಾರ

ಬೆಂಗಳೂರು: ಹಗದೂರು ವಾರ್ಡ್ ವ್ಯಾಪ್ತಿಯಲ್ಲಿ ಬರುವ ವರ್ತೂರು ಕೋಡಿ ವೃತ್ತಕ್ಕೆ ದಿವಂಗತ ಮಧುಕರ್ ಶೆಟ್ಟಿ ಅವರ ಹೆಸರನ್ನು ಇಡಲು ರಾಜ್ಯ ಸರ್ಕಾರ ನಕಾರ ಎತ್ತಿದೆ.

2020 ಮಾರ್ಚ್ 7ರಂದು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಮಧುಕರ್ ಶೆಟ್ಟಿ ಹೆಸರನ್ನು ಇಡುವಂತೆ ಅಂಗೀಕಾರ ಮಾಡಿತ್ತು. ಈ ನಿರ್ಣಯವನ್ನು ಅಂಗೀಕರಿಸುವಂತೆ ಸೆ.22 ರಂದು ಸರ್ಕಾರಕ್ಕೆ ಬಿಬಿಎಂಪಿ ಆಯುಕ್ತರ ಮೂಲಕ ರವಾನೆ ಮಾಡಿತ್ತು. ಆದರೆ ಈಗ ಈ ಪ್ರಸ್ತಾಪವನ್ನು ಸರ್ಕಾರ ಒಪ್ಪಿಲ್ಲ ಎಂದು ಹೇಳಿ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ ಆಯುಕ್ತರಿಗೆ ಡಿ.15ರಂದು ಪತ್ರ ಬರೆದು ತಿಳಿಸಿದೆ.

ಈ ಬಗ್ಗೆ ಬಿಬಿಎಂಪಿ ಕಾಂಗ್ರೆಸ್ ಮುಖಂಡ ಶಿವರಾಜ್ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಂಗಳೂರಿನ ಯಾವುದೋ ವೃತ್ತಕ್ಕೆ ಏನೇನೋ ಹೆಸರುಗಳನ್ನು ಇಡುವಾಗ ನಿಷ್ಠಾವಂತ ಅಧಿಕಾರಿ ಹೆಸರನ್ನು ತಿರಸ್ಕರಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

24/12/2020 05:49 pm

Cinque Terre

39.09 K

Cinque Terre

0