ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶ್ವವಿಖ್ಯಾತ ಹಂಪಿ ವೀಕ್ಷಣೆಗೆ ಮುಕ್ತ ಅವಕಾಶ

ಬಳ್ಳಾರಿ: ಜಿಲ್ಲಾದ್ಯಂತ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಹೀಗಾಗಿ ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗಿದೆ.

Edited By : Nagaraj Tulugeri
PublicNext

PublicNext

09/09/2021 08:34 pm

Cinque Terre

72.14 K

Cinque Terre

2

ಸಂಬಂಧಿತ ಸುದ್ದಿ