ನವದೆಹಲಿ: ಚೀನಾ ಸೇನೆಯು ಭಾತದ ಗಡಿಭಾಗದಲ್ಲಿ ತನ್ನ ಉಪಟಳ ಮುಂದುವರಿಸಿರುವ ಹಿನ್ನೆಲೆ ಕೇಂದ್ರ ಸರ್ಕಾರವು ಉನ್ನತ ಮಟ್ಟದ ಸಭೆಯನ್ನು ನಡೆಸಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಮತ್ತು ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಸುಮಾರು ಮೂರು ಗಂಟೆಗಳ ಕಾಲ ನಡೆದ 'ಚೀನಾ ಸ್ಟಡಿ ಗ್ರೂಪ್' ಸಭೆಯಲ್ಲಿ ಭಾಗವಹಿಸಿದ್ದರು.
ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಸಿಕ್ಕಿಂ, ಅರುಣಾಚಲ ಪ್ರದೇಶ ವಲಯಗಳು ಸೇರಿದಂತೆ ಚೀನಾ-ಭಾರತದ 3,500 ಕಿ.ಮೀ. ಉದ್ದದ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಗಸ್ತು ಹೆಚ್ಚಿಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿದೆ. ಜೊತೆಗೆ ಪೂರ್ವ ಲಡಾಖ್ ಸೇರಿದಂತೆ ಎಲ್ಲ ಅತಿ ಸೂಕ್ಷ್ಮ ಎತ್ತರದ ಪ್ರದೇಶಗಳಲ್ಲಿ ಚಳಿಗಾಲದಲ್ಲಿಯೂ ಸೇನಾ ಸಿಬ್ಬಂದಿ ಮತ್ತು ಯುದ್ಧೋಪಕರಣಗಳನ್ನು ಸುಸ್ಥಿತಿಯಲ್ಲಿ ನಿರ್ವಹಿಸುವ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ.
PublicNext
19/09/2020 03:00 pm