ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಅನ್ನದಾತರು ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ, ಕೆನಡಾ ಹೈಕಮಿಷನರ್ ಕರೆಸಿಕೊಂಡು ಪ್ರತಿಭಟನೆ ದಾಖಲಿಸಿದೆ.
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಇತರ ಕೆಲವು ನಾಯಕರು ರೈತರ ಆಂದೋಲನದ ಬಗ್ಗೆ ಹೇಳಿಕೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ದೇಶದ ಆಂತರಿಕ ವ್ಯವಹಾರಗಳಲ್ಲಿ "ಹಸ್ತಕ್ಷೇಪ ಸರಿಯಲ್ಲ" ಎಂದು ಭಾರತ ಹೇಳಿದೆ.
ಇಂತಹ ಕ್ರಮಗಳು ಮುಂದುವರಿದರೆ ದ್ವಿಪಕ್ಷೀಯ ಸಂಬಂಧಗಳ ಮೇಲೆ "ಗಂಭೀರ" ಪರಿಣಾಮ ಬೀರುತ್ತದೆ ಎಂದು ಕೆನಡಾದ ರಾಜತಾಂತ್ರಿಕರಿಗೆ ಎಚ್ಚರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ರೈತರು ಹೊಸ ಕೃಷಿ ಮಸೂದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಆತಂಕಕಾರಿಯಾಗಿದ್ದು, ನಾವು ಸ್ನೇಹಿತರು ಹಾಗೂ ಸಂಬಂಧಿಕರ ಬಗ್ಗೆ ಚಿಂತಿತರಾಗಿದ್ದೇವೆ ಎಂದು ಕೆನಡಾ ಪ್ರಧಾನಿ ಹೇಳಿದ್ದರು.
ಇದಕ್ಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ಭಾರತ, ಅವರ ಹೇಳಿಕೆ ಅನಪೇಕ್ಷಿತ ಮತ್ತು ಅನಗತ್ಯ ಎಂದಿದೆ.
PublicNext
05/12/2020 07:32 am