ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇಂದ್ರ ಸರಕಾರದ ಕೃಷಿ ಮಸೂದೆಗೆ ದೊಡ್ಡಣ್ಣನ ಸಾಥ್

ವಾಷಿಂಗ್ಟನ್: ದೇಶದಲ್ಲಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ವಿದೇಶಿಯರು ಬೆಂಬಲ ಸೂಚಿಸಿರುವುದಕ್ಕೂ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪರ ವಿರೋಧ ಚರ್ಚೆಗಳಾಗುತ್ತಿವೆ.

ಇದರ ಬೆನ್ನಲ್ಲೇ ವಿಶ್ವದ ದೊಡ್ಡಣ್ಣ ಅಮೆರಿಕದ ಅಧ್ಯಕ್ಷ ಬೈಡೆನ್ ನೇತೃತ್ವದ ಸರಕಾರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದೆ ರೈತರು ಮತ್ತು ಭಾರತ ಸರಕಾರ ಶಾಂತಿಯುತವಾಗಿ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಸಮರ್ಪಕವಾಗಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ಜತೆಗೆ ಭಾರತ ಸರಕಾರವು ಮಾರುಕಟ್ಟೆ ದಕ್ಷತೆಯ ಸುಧಾರಣೆಗೆ ಮತ್ತು ಖಾಸಗಿ ವಲಯದಿಂದ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಕೈಗೊಂಡಿರುವ ಕ್ರಮಗಳು ಸ್ವಾಗತಾರ್ಹ ಎಂದಿದೆ. ಈ ಮೂಲಕ ಅಮೆರಿಕವು ಕೇಂದ್ರ ಸರಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆಗಳನ್ನು ಬೆಂಬಲಿಸಿ ಮಾತನಾಡಿದೆ.

Edited By : Nirmala Aralikatti
PublicNext

PublicNext

05/02/2021 09:42 am

Cinque Terre

91.16 K

Cinque Terre

6

ಸಂಬಂಧಿತ ಸುದ್ದಿ