ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ನವೀನ್ ಸಾವು ನಮಗೂ ದುಃಖ ತಂದಿದೆ: ಸಂಸದ ಉದಾಸಿ

ಹಾವೇರಿ: ಉಕ್ರೇನ್‌ನಲ್ಲಿ ಕನ್ನಡಿಗ ನವೀನ್ ಸಾವನ್ನಪ್ಪಿದ್ದು ನಮಗೂ ತುಂಬಾ ದುಃಖ ತಂದಿದೆ. ಮತ್ತಿತರ ವಿದ್ಯಾರ್ಥಿಗಳನ್ನು ಕರೆತರುವ ಪ್ರಯತ್ನ ನಿರಂತರವಾಗಿ ನಡೆದಿದೆ ಎಂದು ಸಂಸದ ಶಿವಕುಮಾರ್ ಉದಾಸಿ ಹೇಳಿದ್ದಾರೆ.

ಚಳಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಓದಲಿಕ್ಕೆಂದು ಉಕ್ರೇನ್‌ಗೆ ಹೋದ ನವೀನ್ ಮೃತಪಟ್ಟಿದ್ದಾನೆ. ಆತನ ಪಾರ್ಥಿವ ಶರೀರ ತರಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.‌ ಜೊತೆಗೆ ಅಲ್ಲಿರುವ ಇತರ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ವಾಪಸ್ ಕರೆ ತರುವಂತೆ ಒತ್ತಾಯಿಸಿದ್ದಾರೆ ಎಂದರು.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳನ್ನು ಭೇಟಿ ಆಗುತ್ತಿದ್ದೇನೆ. ನವೀನ್ ಪಾರ್ಥಿವ ಶರೀರ ತರಿಸೋಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಜೊತೆಗೆ ಅಲ್ಲಿರುವ ಭಾರತೀಯರನ್ನು ಕರೆತರುವ ಪ್ರಯತ್ನವನ್ನು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

Edited By : Manjunath H D
PublicNext

PublicNext

01/03/2022 08:49 pm

Cinque Terre

61.43 K

Cinque Terre

2

ಸಂಬಂಧಿತ ಸುದ್ದಿ