" ನಾವು ಬದುಕಿ ಬಂದಿದ್ದೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದ ''
ಹಾವೇರಿ : ರಷ್ಯಾ ದಾಳಿಯಲ್ಲಿ ನಿನ್ನೆಯಷ್ಟೇ ರಾಜ್ಯದ ಹಾವೇರಿ ಜಿಲ್ಲೆಯ ನವೀನ್ ಎಂಬ ವೈದ್ಯ ವಿದ್ಯಾರ್ಥಿ ಉಕ್ರೇನ್ ದಲ್ಲಿ ಸಾವಿಗೀಡಾದ ಬೆನ್ನಲ್ಲೇ ಅದೇ ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ಸುರಕ್ಷಿತವಾಗಿ ತಾಯ್ನಾಡನ್ನು ತಲುಪಿದ್ದಾಳೆ.
ಆಕೆಯನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಭಾರತ ಸರ್ಕಾರ ಅದರಲ್ಲೂ ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಶಂಸಿಸಿದ್ದಾಳೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಮೈನಾ ನಾಯ್ಕ ಎಂಬ ವಿದ್ಯಾರ್ಥಿನಿ ಯುಕ್ರೇನ್ ನ ಪಶ್ಚಿಮ ಭಾಗದಲ್ಲಿ ವೈದ್ಯಕೀಯ ಕೊರ್ಸ್ ಮೊದಲನೇಯ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆ ಅಲ್ಲಿ ಸಿಲುಕಿ ಹಾಕಿಕೊಂಡಿರುವ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಫೋನ್ ಮಾಡಿ ಹೇಳಿದ್ದೇ ತಡ ಕೂಡಲೇ ಸ್ಪಂದಿಸಿ ನಮ್ಮ ಮಗಳನ್ನು ಸುರಕ್ಷಿತವಾಗಿ ಕರೆ ತರಲು ಸಾಕಷ್ಟು ಕಾರ್ಯವನ್ನು ಮಾಡಿದ್ದಾರೆ ಹೀಗಾಗಿ ಅವರಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ನಾಯ್ಕ ಕುಟುಂಬದವರು ಹೇಳಿದ್ದಾರೆ.
" ನಾನು ಏನಾದರೂ ಬದುಕಿ ಇಲ್ಲಿಗೆ ಬಂದಿದ್ದೇನೆ ಎಂದರೆ ಅದಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾರಣ '' ಎಂದು ಕುಮಾರಿ ಮೈನಾ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ.
PublicNext
02/03/2022 07:12 pm