ರಾಮಲ್ಲಾ: ಪ್ಯಾಲೆಸ್ತೀನ್‌ನಲ್ಲಿದ್ದ ಭಾರತೀಯ ರಾಯಭಾರಿ ಮುಕುಲ್ ಆರ್ಯ ಅವರು ರಾಮಲ್ಲಾದಲ್ಲಿರುವ ರಾಯಭಾರ ಕಚೇರಿಯಲ್ಲಿ ಭಾನುವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. 2008ನೇ ಬ್ಯಾಚ್ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿರುವ ಆರ್ಯ ಅವರ ಸಾವಿಗೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು, "ರಾಮಲ್ಲಾದಲ್ಲಿ ಭಾರತದ ಪ್ರತಿನಿಧಿ ಶ್ರೀ ಮುಕುಲ್ ಆರ್ಯ ಅವರ ನಿಧನದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಅವರು ಪ್ರತಿಭಾವಂತ ಅಧಿಕಾರಿಯಾಗಿದ್ದರು. ಓಂ ಶಾಂತಿ" ಎಂದು ತಿಳಿಸಿದ್ದಾರೆ.
ಭಾರತೀಯ ರಾಯಭಾರಿಯು ರಮಲ್ಲಾದಲ್ಲಿನ ಅವರ ಕೆಲಸದ ಸ್ಥಳದಲ್ಲಿ ನಿಧನರಾದರು ಎಂದು ಪ್ಯಾಲೆಸ್ತೀನ್ ವಿದೇಶಾಂಗ ಸಚಿವಾಲಯ ತಿಳಿಸಿದೆ. ದೇಹವನ್ನು ಭಾರತಕ್ಕೆ ಸಾಗಿಸುವ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕ ಸ್ಥಾಪಿಸಿದ್ದಾರೆ. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಮಾಹಿತಿಗಾಗಿ ಕಾಯಲಾಗುತ್ತಿದೆ.
PublicNext
07/03/2022 09:15 am