ಇಸ್ಲಾಮಾಬಾದ್: ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ ವಿಡಿಯೋ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಅಸ್ಮಾ ಶಫೀಕ್ ಎಂಬ ಪಾಕಿಸ್ತಾನದ ಮಹಿಳೆ ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಮತ್ತು ಯುದ್ಧ ಪೀಡಿತ ಉಕ್ರೇನ್‌ನಲ್ಲಿ ತನ್ನನ್ನು ಕಠಿಣ ಪರಿಸ್ಥಿತಿಯಿಂದ ರಕ್ಷಿಸಿದ್ದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ಆಕೆಯನ್ನು ಭಾರತೀಯ ಅಧಿಕಾರಿಗಳು ರಕ್ಷಿಸಿದ್ದು, ಉಕ್ರೇನ್‌ನಿಂದ ಸ್ಥಳಾಂತರಿಸಲು ಪಶ್ಚಿಮ ಉಕ್ರೇನ್‌ಗೆ ತೆರಳುತ್ತಿದ್ದಾರೆ. ಅವಳು ಶೀಘ್ರದಲ್ಲೇ ತನ್ನ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
PublicNext
09/03/2022 10:18 am