ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಪಾಕಿಸ್ತಾನದ ಪ್ರಚೋದಿತ ಮಿಲಿಟರಿ ಬಲಕ್ಕೆ ಪ್ರತ್ಯುತ್ತರ ನೀಡುವ ಸಾಧ್ಯತೆ ಹೆಚ್ಚಾಗಿದೆ ಎಂದು ಅಮೆರಿಕದ ಗುಪ್ತಚರ ಮೂಲವು ಯುಎಸ್ ಕಾಂಗ್ರೆಸ್‌ಗೆ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.
'ಪಾಕಿಸ್ತಾನವು ಭಾರತ ವಿರೋಧಿ ಉಗ್ರಗಾಮಿ ಗುಂಪುಗಳನ್ನು ಬೆಂಬಲಿಸುವ ಸುದೀರ್ಘ ಇತಿಹಾಸವನ್ನು ಹೊಂದಿದೆ. ಈ ಭಯೋತ್ಪಾದಕ ಸಂಘಟನೆಗಳನ್ನು ಭಾರತವು ಮಟ್ಟ ಹಾಕುವ ಸಾಧ್ಯತೆಗಳು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಕಾಶ್ಮೀರದಲ್ಲಿ ಹಿಂಸಾತ್ಮಕ ಅಶಾಂತಿ ಅಥವಾ ಭಾರತದಲ್ಲಿ ಉಗ್ರಗಾಮಿ ಅಟ್ಟಹಾಸವು ಹೆಚ್ಚಾದರೆ ಭಾರತ ಸೈನ್ಯವು ಭಾರಿ ಪ್ರಮಾಣದ ಪ್ರತ್ಯುತ್ತರ ನೀಡಲು ಸಜ್ಜಾಗಿದೆ' ಎಂದು ಅಮೆರಿಕದ ಗುಪ್ತಚರ ಇಲಾಖೆಯು ತಿಳಿಸಿದ್ದಾಗಿ ವರದಿ ಹೇಳಿದೆ.
PublicNext
09/03/2022 11:23 am