ಬೆಂಗಳೂರು: ಕರ್ನಾಟಕದ ಉದ್ಯಮ ಸ್ನೇಹಿ ರ‍್ಯಾಂಕಿಂಗ್ 8ರಿಂದ 17ನೇ ಸ್ಥಾನಕ್ಕಿಳಿದ ವಿಚಾರವಾಗಿ ರಾಜ್ಯ ಸರ್ಕಾರವು ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿರುವ 2018-19ನೇ ಸಾಲಿನ ಉದ್ಯಮ ಸ್ನೇಹಿ ರಾಜ್ಯಗಳ ರ‍್ಯಾಂಕಿಂಗ್‌ನಲ್ಲಿ ಕರ್ನಾಟಕ 17ನೇ ಸ್ಥಾನ ಪಡೆದಿತ್ತು. ಆದರೆ ಕಳೆದ ಸಾಲಿನಲ್ಲಿ 8ನೇ ಸ್ಥಾನದಲ್ಲಿದ್ದ ರಾಜ್ಯ 9 ಸ್ಥಾನಗಳಷ್ಟು ಕುಸಿತ ಕಂಡಿರುವುದು ಸಿಎಂ ಯಡಿಯೂರಪ್ಪ ಅವರ ಸರ್ಕಾರವನ್ನು ದಿಗ್ಬ್ರಮೆಗೊಳಿಸಿತ್ತು. ಹೀಗಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರ‍್ಯಾಂಕಿಂಗ್‌ನ ಮೌಲ್ಯಮಾಪನಗಳು ಮತ್ತು ಸ್ಪರ್ಧೆಯ ವಿಧಾನವನ್ನು, ರಾಜ್ಯಗಳ ಕಾರ್ಯಕ್ಷಮತೆಯನ್ನು ಮರು ಮೌಲ್ಯಮಾಪನ ಮಾಡಿ ರ‍್ಯಾಂಕಿಂಗನ್ನು ಮತ್ತೆ ಪರಿಷ್ಕರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 2018-19ರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನ, ಉತ್ತರ ಪ್ರದೇಶದ 2ನೇ ಸ್ಥಾನದಲ್ಲಿದೆ. ಕರ್ನಾಟಕ 17ನೇ ಸ್ಥಾನ ಪಡೆದಿದೆ.
PublicNext
23/09/2020 05:02 pm