ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಸಾದ 2 ಮಸೂದೆಗಳು ರೈತರ ವಿರುದ್ಧದ 'ಡೆತ್ ಆರ್ಡರ್' : ರಾಗಾ ಕಿಡಿ

ನವದೆಹಲಿ : ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೇ ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳಿಗೆ ಅಂಗೀಕಾರ ಪಡೆಯುವುದರಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.

ಈ ಮಸೂದೆಯ ಅಂಗಿಕಾರದ ಬೆನ್ನಲ್ಲೇ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹೌದು ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ಕೃಷಿ ಮಸೂದೆಗಳಿಗೆ ರೈತರ ವಿರುದ್ಧದ ಡೆತ್ ವಾರೆಂಟ್ ಆಗಿದೆ ಎಂದು ರಾಗಾ ಕಿಡಿಕಾರಿದ್ದಾರೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರೈತರ ಉತ್ಪನ್ನ ಮಾರಾಟ ಮತ್ತು ವ್ಯವಹಾರ ( ಪ್ರಚಾರ ಮತ್ತು ಸೌಲಭ್ಯ)

ರೈತರು (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ 2020 ಮಸೂದೆಯನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ.

ಕೃಷಿ ಮಸೂದೆಯ ಹೆಸರಿನಲ್ಲಿ ರಾಜ್ಯಸಭೆಯಲ್ಲಿ ಇಂದು ರೈತರ ವಿರುದ್ಧದ ಮರಣ ದಂಡನೆ ಆದೇಶ ನೀಡಲಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Edited By : Nirmala Aralikatti
PublicNext

PublicNext

20/09/2020 08:37 pm

Cinque Terre

83.87 K

Cinque Terre

2

ಸಂಬಂಧಿತ ಸುದ್ದಿ