ನವದೆಹಲಿ : ಇಂದು ಸಂಸತ್ ಭವನದಲ್ಲಿ ಪ್ರಧಾನಿಯನ್ನು ಭೇಟಿ ಮಾಡಿದ ಸಿಎಂ ಬಿಎಸ್ ವೈ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸಿನ ನೆರವು ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಆರಂಭದಲ್ಲಿ ಈ ಬಾರಿ ನೆರೆ ಬಂದ ಹಿನ್ನೆಲೆಯಲ್ಲಿ ಎನ್ ಡಿಆರ್ಎಫ್ ನಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ.
ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಆರ್ಥಿಕ ವ್ಯವಹಾರಗಳ ಸಮಿತಿಯಿಂದ ಒಪ್ಪಿಗೆ ಕೊಡಿಸಬೇಕು. ಮೇಕೆದಾಟು, ಕಳಸಾ ಬಂಡೂರಿ ಯೋಜನೆಗೆ ಇರುವ ಅಡಚಣೆಗಳನ್ನು ಬಗೆಹರಿಸಬೇಕು.
ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆ ಮನವಿ ಮಾಡಿದ್ದಾರೆ.
ಕೊನೆಗೆ ನವೆಂಬರ್ 19 ರಂದು ಆಯೋಜನೆಗೊಂಡಿರುವ ಬೆಂಗಳೂರು ಟೆಕ್ ಸಮ್ಮೇಳನ ಉದ್ಘಾಟಿಸಲು ರಾಜ್ಯಕ್ಕೆ ಬರುವಂತೆ ಪ್ರಧಾನಿಗೆ ಸಿಎಂ ಆಹ್ವಾನ ನೀಡಿದರು.
ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲಿರುವ ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ.
PublicNext
18/09/2020 03:19 pm