ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯೋಗಿ ಸರ್ಕಾರ ಸಂಪೂರ್ಣ ದುರ್ಬಲವಾಗಿದೆ : ಬಿಎಸ್ಪಿ ನಾಯಕಿ ಮಾಯಾವತಿ

ಲಖನೌ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಅಪರಾಧಗಳು, ಮಾಫಿಯಾಗಳು, ಅತ್ಯಾಚಾರಗಳು ನಿರಂತರವಾಗಿ ನಡೆಯುತ್ತಿವೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಕಿಡಿಕಾರಿದ್ದಾರೆ.

ಇತ್ತೀಚ್ಚೆಗೆ ಯುಪಿನಲ್ಲಿ ನಡೆದ ಘಟನೆಗಳು ನಿಜಕ್ಕೂ ನಾಗರೀಕ ಸಮಾಜ ತೆಲೆತಗ್ಗಿಸುವಂತವು.

ಹತ್ರಾಸ್ ಘಟನೆ ನಡೆದು ಒಂದು ದಿನ ಕಳೆಯುವಷ್ಟರಲ್ಲಿ ಮತ್ತೆ ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ.

ಮಹಿಳೆಯರಿಗೆ ರಕ್ಷಣೆ ಒದಗಿಸುವ ಸಾಮರ್ಥ್ಯ ಇಲ್ಲದಿದ್ದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಲಿ.

ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಅವರು ವಿಫಲರಾಗಿದ್ದು, ಕೇಂದ್ರ ಸರ್ಕಾರ ಅವರನ್ನು ವಾಪಸ್ ಗೋರಖ್ ಮಠಕ್ಕೆ ಕಳುಹಿಸಬೇಕೆಂದು ಮಾಯಾವತಿ ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

01/10/2020 01:45 pm

Cinque Terre

83.26 K

Cinque Terre

17

ಸಂಬಂಧಿತ ಸುದ್ದಿ