ಪ್ರಸಕ್ತ ಸಾಲಿನ ಕಬ್ಬಿನ ಎಫ್ಆರ್‌ಪಿ ದರ ಟನ್‌ಗೆ 3050 ರೂ. ನಿಗದಿ ಮಾಡಿರುವುದು ನ್ಯಾಯ ಸಮ್ಮತವಲ್ಲ. ಇದನ್ನು ವಿರೋಧಿಸಿ ಪುನರ್ ಪರಿಶೀಲನೆಗಾಗಿ ಒತ್ತಾಯಿಸಿ, ರಾಜ್ಯದ್ಯಾಂತ ಈಗಾಗಲೇ ಪ್ರತಿಭಟನೆ ನಡೆಸಲಾಗಿದೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದು ರಾಜ್ಯದ ರೈತರಿಗೆ ಮಾಡಿದ ಅವಮಾನ, ಸರ್ಕಾರದ ನಿರ್ಲಕ್ಷತನ ಖಂಡಿಸಿ ರಾಜ್ಯದ ಕಬ್ಬು ಬೆಳೆಗಾರ ರೈತರಿಂದ ಬೃಹತ್ ಸಂಖ್ಯೆಯಲ್ಲಿ ಸೆಪ್ಟಂಬರ್ ನಲ್ಲಿ ವಿಧಾನಸೌಧ ಚಲೋ ನಡೆಸಲಾಗುವುದೆಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.
ಗದಗನಲ್ಲಿ ಈ ಕುರಿತು ಪತ್ರಿಕಾ ಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಬ್ಬು ಉತ್ಪಾದನೆಗೆ ಬಳಸುವ ರಸಗೊಬ್ಬರ, ಪೊಟ್ಯಾಶ್, ಡಿಎಪಿ, ಏರಿಕೆಯಾಗಿದೆ. ಕಟಾವು ಕೂಲಿ ಸಾಗಾಣಿಕೆ ವೆಚ್ಚ, ಬೀಜದ ಬೆಲೆ ಏರಿಕೆಯಾಗಿದೆ. ಆದರೆ ಕೇಂದ್ರ ಸರ್ಕಾರ ಸಕ್ಕರೆ ಇಳುವರಿಯನ್ನು10 ರಿಂದ 10.25 ಏರಿಕೆ ಮಾಡಿ 150 ರೂ ಹೆಚ್ಚುವರಿ ಮಾಡಿ ಟನ್‌ಗೆ 3050 ನಿಗದಿ ಮಾಡಿದೆ. ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ. ಈ ದರ ಪುನರ್ ಪರಿಶೀಲನೆ ಆಗಲೇಬೇಕು ಎಂದರು.
75 ರೂ ಕಡಿತವಾಗುತ್ತದೆ, ಯುಪಿ ಸರ್ಕಾರದ ಮಾನದಂಡದಂತೆ ಕನಿಷ್ಠ 3500 ರೂ ನಿಗದಿ ಆಗಲೇಬೇಕು. ಕೇಂದ್ರ ಸರ್ಕಾರ ಸಕ್ಕರೆ ಉದ್ದಿಮೆದಾರರ ತಾಳಕ್ಕೆ ತಕ್ಕಂತೆ ಕುಣಿದು ರೈತರಿಗೆ ಅನ್ಯಾಯ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ಇನ್ನಿತರರು ಪಾಲ್ಗೊಂಡಿದ್ದರು.
PublicNext
01/09/2022 03:09 pm