ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಬಲಿಗಾಗಿ ಕಾಯುತ್ತಿರುವ ವಿದ್ಯುತ್ ಕಂಬ..!

ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸರ್ಕಾರಿ ಪ್ರೌಢ ಶಾಲೆಯ ಮುಂಬಾಗದಲ್ಲಿರುವ ಕೆಪಿಟಿಸಿಎಲ್ ವಿದ್ಯುತ್ ಕಂಬ ಭಾನುವಾರ ರಾತ್ರಿ ಯಾವುದು ವಾಹನ ಡಿಕ್ಕಿ ಹೊಡೆದ ಪರಿಣಾಮ ಕಂಬ ಬಿರುಕುಬಿಟ್ಟಿದ್ದು, ನೆಲಕ್ಕುರುಳುವ ಸಾಧ್ಯತೆ ಹೆಚ್ಚಾಗಿದೆ.

ವಿದ್ಯುತ್ ಕಂಬಕ್ಕೆ ಹೊಂದಿಕೊಂಡಂತೆ ಸರ್ಕಾರಿ ಬಾಲಕಿಯರ ಪಾಠಶಾಲೆ ಇದ್ದು, ಪಕ್ಕದಲ್ಲಿ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಸಮಯದಲ್ಲಿ ಈ ಕಂಬವು ನೆಲಕ್ಕುರುಳಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಗಮನಿಸಿ ಕೆಪಿಟಿಸಿಎಲ್‌ಗೆ ಶೀಘ್ರ ಮಾಹಿತಿ ತಿಳಿಸಿ ಕಂಬವನ್ನು ತೆರವುಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

ವರದಿ: ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್

Edited By :
PublicNext

PublicNext

22/08/2022 12:33 pm

Cinque Terre

59.31 K

Cinque Terre

0