ಬೆಂಗಳೂರು: ಗಜೇಂದ್ರಗಡ ತಾಲೂಕಿನ ಹಾಲಕೇರಿ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಸಂಗನಬಸವ (ಅಭಿನವ ಅನ್ನದಾನೇಶ್ವರ) ಸ್ವಾಮೀಜಿಗಳು ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಅಪೋಲೋ ಆಸ್ಪತ್ರೆ ತೆರಳುತ್ತಿರುವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾಲಕೇರಿಯ ಅಭಿನವ ಅನ್ನದಾನೇಶ್ವರ ಶ್ರೀಗಳು ರಾಜ್ಯಾದಂತ್ಯ ಲಕ್ಷಾಂತರ ಭಕ್ತರನ್ನು ಹೊಂದಿದ್ದಾರೆ. ಶ್ರೀಗಳು ನಮಗೆಲ್ಲ ಆಶೀರ್ವಾದ, ಮಾರ್ಗದರ್ಶನ ಮಾಡುತ್ತಿದ್ದರು. ಅವರ ಅಗಲಿಗೆ ಭಕ್ತರಿಗೆ ನೋವು ತಂದಿದೆ ಎಂದು ಸಂತಾಪ ಸೂಚಿಸಿದರು.
PublicNext
22/11/2021 10:46 am