ಸವದತ್ತಿ: ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ಜೂ. 22, 23 ಎರಡು ದಿನ ಹುಂಡಿ ಎಣಿಕೆ ಕಾರ್ಯ ಜರುಗಿತು. ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು,
ಜಿಲ್ಲಾಧಿಕಾರಿಗಳ ಕಚೇರಿ, ಯಲ್ಲಮ್ಮನಗುಡ್ಡ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಳಗಾವಿ ಸಹಾಯಕ ಆಯುಕ್ತರು ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಸವದತ್ತಿ ತಹಶೀಲ್ದಾರ್ ಹಾಗೂ ಸವದತ್ತಿ ಠಾಣೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಒಡೆದು ಹಣ ಎಣಿಸಲಾಯಿತು.
ಯಲ್ಲಮ್ಮನ ಗುಡ್ಡದಲ್ಲಿ 45 ದಿನಗಳಲ್ಲಿ ದಾಖಲೆಯ ಮೊತ್ತ 1 ಕೋಟಿ, 13 ಲಕ್ಷ ರೂ. ಸಂಗ್ರಹವಾಗಿದೆ. ಅಲ್ಲದೆ ಸುಮಾರು 22 ಲಕ್ಷ ರೂ. ಮೌಲ್ಯದ ಬಂಗಾರ ಮತ್ತು ಸುಮಾರು 3 ಲಕ್ಷ ರೂ. ಮೌಲ್ಯದ ಬೆಳ್ಳಿ ಸಂಗ್ರಹವಾಗಿದೆ. ದೇವಸ್ಥಾನದ 100 ಸಿಬ್ಬಂದಿ, ಕೆನರಾ ಬ್ಯಾಂಕ್‌ನ 10 ಜನ ಮತ್ತು 10 ಹೋಂ ಗಾರ್ಡ್ಸ ಹಾಗೂ ಅಧಿಕಾರಿಗಳು ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
PublicNext
24/06/2022 09:27 pm