ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಇನ್ನು ಪಹಲ್ಗಾಮ್ ನ ನುನ್ವಾನ್ ಶಿಬಿರದಿಂದ ಪವಿತ್ರ ಗುಹೆಯತ್ತ ತೆರಳಲು ಯಾತ್ರಾರ್ಥಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರನಾಥ ಯಾತ್ರಾರ್ಥಿಗಳ ಮೊದಲ ಬ್ಯಾಚ್ ಕಳೆದ ಗುರುವಾರ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮೂಲ ಶಿಬಿರವನ್ನು ತಲುಪಿತ್ತು. ಜೂ.30ರಂದು ಯಾತ್ರೆ ಪ್ರಾರಂಭವಾದಾಗಿನಿಂದ ಸುಮಾರು 72,000 ಜನರು ದೇಗುಲಕ್ಕೆ ಭೇಟಿ ನೀಡಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಯಾತ್ರಾರ್ಥಿಗಳಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ವಿಶೇಷ ವ್ಯವಸ್ಥೆಗಳನ್ನು ಮಾಡಿದೆ.

Edited By : Nirmala Aralikatti
PublicNext

PublicNext

05/07/2022 12:57 pm

Cinque Terre

54.5 K

Cinque Terre

0

ಸಂಬಂಧಿತ ಸುದ್ದಿ