ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಅಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ. ಸದರಿ ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.
PublicNext
23/08/2022 09:10 pm