ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂಗೆ ಅಹವಾಲು ಸಲ್ಲಿಸಲು ಹೀಗೆ ಮಾಡಿ

ಬೆಂಗಳೂರು : ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ.

ಹೀಗಾಗಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ.

ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ, ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು cm.kar@nic.in ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

ಜನವರಿ 1ರಿಂದ ಇದು ಚಾಲ್ತಿಗೆ ಬರಲಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Edited By : Nirmala Aralikatti
PublicNext

PublicNext

28/12/2020 02:01 pm

Cinque Terre

29.81 K

Cinque Terre

1