ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಲಾಗಿದೆ.
ಹಾಲಿ ಮುಖ್ಯ ಕಾರ್ಯದರ್ಶಿಯಾಗಿರುವ ಟಿ.ಎಂ.ವಿಜಯ್ ಭಾಸ್ಕರ್ ಅವರು ಡಿಸೆಂಬರ್ 31ಕ್ಕೆ ನಿವೃತ್ತಿ ಹೊಂದಲಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೆ 1984ನೇ ಬ್ಯಾಚ್ ಐಎಎಸ್ ಅಧಿಕಾರಿ, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
PublicNext
30/12/2020 06:16 pm