ನವದೆಹಲಿ: ರಾಜ್ಯದ ಚಿತ್ರಮಂದಿರಗಳಲ್ಲಿ ಸಿನಿಮಾಗಳ ಹೌಸ್‌ಪುಲ್ ಪ್ರದರ್ಶನಕ್ಕೆ ನೀಡಿರುವ ಆದೇಶವನ್ನು ವಾಪಸ್ ಪಡೆಯುವಂತೆ ತಮಿಳುನಾಡು ಸರ್ಕಾರಕ್ಕೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ.
ದೇಶದಲ್ಲಿ ಕೊರೊನಾ ಆತಂಕ ಕಡಿಮೆಯಾಗಿಲ್ಲ. ಹೀಗಿರುವಾಗ ಚಿತ್ರಮಂದಿರ, ಮಲ್ಟಿಫ್ಲೆಕ್ಸ್ ಗಳ ಆಸನ ಸಾಮರ್ಥ್ಯವನ್ನು ಈಗಿರುವ ಶೇ.50ರಿಂದ 100ಕ್ಕೆ ಹೆಚ್ಚಿಸಲು ತಮಿಳುನಾಡು ಸರ್ಕಾರ ಸೋಮವಾರ ಅನುಮತಿ ನೀಡಿತ್ತು. ಆದರೆ ಇದಕ್ಕೆ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರವು, ನಿಮ್ಮ ಈ ಆದೇಶವು ಎಂಎಚ್‌ಎ ಆದೇಶವನ್ನು ದುರ್ಬಲಗೊಳಿಸುತ್ತಿದೆ. ಸದ್ಯ ಚಿತ್ರಮಂದಿರಗಳಲ್ಲಿ ಶೇ.50 ಆಸನಗಳಿಗೆ ಮಾತ್ರ ಅವಕಾಶವಿದೆ. ಅದನ್ನೇ ಮುಂದುವರಿಸಬೇಕು ಎಂದು ತಿಳಿಸಿದೆ.
PublicNext
06/01/2021 07:42 pm