ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಮ್ಮಾಯಿ ಭರವಸೆ : ಸೊಲ್ಲಾಪುರ, ಸಾಂಗ್ಲಿಯನ್ನು ಕರ್ನಾಟಕಕ್ಕೆ ಸೇರಿಸುವೆವು...

ಬೆಂಗಳೂರು : ಮರಾಠಿ ಭಾಷಿಗರು ಹೆಚ್ಚಾಗಿರುವ ಕರ್ನಾಟಕದ ಗಡಿ ಜಿಲ್ಲಾ ಪ್ರದೇಶಗಳನ್ನುಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ಹೋರಾಟ ಮಾಡಲಾಗುವುದು ಎಂದು ಕರೆ ನೀಡಿದ್ದ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕರ್ನಾಟಕದ ಸಿಎಂ ಸೇರಿದಂತೆ ಎಲ್ಲ ಪಕ್ಷಗಳ ನಾಯಕರೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ಕರ್ನಾಟಕದ ಒಂದಿಂಚು ಜಾಗವನ್ನೂ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ. ಅದರ ಬದಲಾಗಿ ಮಹಾರಾಷ್ಟ್ರದ ಗಡಿಯಲ್ಲಿರುವ ಸೊಲ್ಲಾಪುರ, ಸಾಂಗ್ಲಿಯನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುತ್ತೇವೆ ಎಂದಿದ್ದಾರೆ.

ಗಡಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ನಮ್ಮ ರಾಜ್ಯದ ಒಂದಿಂಚೂ ಭೂಮಿಯನ್ನೂ ನಾವು ಬಿಡುವುದಿಲ್ಲ. ಮಹಾರಾಷ್ಟ್ರದ ಗಡಿಯಲ್ಲಿರುವ ಸೊಲ್ಲಾಪುರ, ಸಾಂಗ್ಲಿಯಲ್ಲಿ ಕನ್ನಡಿಗರು ಹೆಚ್ಚಿದ್ದಾರೆ. ಹೀಗಾಗಿ, ಆ ಭಾಗಗಳನ್ನು ನಮ್ಮ ರಾಜ್ಯಕ್ಕೆ ಸೇರಿಸಿಕೊಳ್ಳೋಕೆ ಪ್ರಯತ್ನ ಮಾಡುತ್ತಿದ್ದೇವೆ. ಆ ಬಗ್ಗೆ ನಾವು ಚಿಂತನೆ ಮಾಡುತ್ತಿದ್ದೇವೆ. ಬೆಳಗಾವಿ ಭಾಗದಲ್ಲಿರುವ ಮರಾಠಿಗರು ಶಾಂತಿಯನ್ನು ಉಳಿಸುವ ಪ್ರಯತ್ನ ಮಾಡಬೇಕು. ಅವರು ಕರ್ನಾಟಕಕ್ಕೆ ಸೇರಿದವರು ಎಂಬುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ಇಲ್ಲಸಲ್ಲದ ಅನಾವಶ್ಯಕ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಈ ಗಡಿ ವಿವಾದ ಈಗಾಗಲೇ ಇತ್ಯರ್ಥವಾಗಿದೆ. ಮಹಾಜನ್ ವರದಿಯೇ ಅಂತಿಮವಾಗಿದೆ. ಅದಕ್ಕೆ ಪಾರ್ಲಿಮೆಂಟ್ ಕೂಡ ಒಪ್ಪಿಗೆ ನೀಡಿದೆ. ಶಾಂತವಾಗಿರುವ ಬೆಳಗಾವಿ ಪರಿಸ್ಥಿತಿಯನ್ನು ಕದಡಲು ಪ್ರಯತ್ನ ಮಾಡುತ್ತಿರುವುದು ಸರಿಯಲ್ಲ. ಉದ್ಧವ್ ಠಾಕ್ರೆ ಶಾಂತಿ ಕದಡುವ ಪ್ರಯತ್ನ ಮಾಡಬಾರದು. ಅಂತಹ ಪ್ರಯತ್ನಕ್ಕೆ ನಾವು ಜಗ್ಗುವುದಿಲ್ಲ ಎಂದು ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

Edited By : Nirmala Aralikatti
PublicNext

PublicNext

18/01/2021 04:00 pm

Cinque Terre

43.23 K

Cinque Terre

4

ಸಂಬಂಧಿತ ಸುದ್ದಿ