ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಜ.24ರಂದು ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯಾದಂತ್ಯ ನಾಳೆ (ಜನವರಿ 24ರಂದು) ನಡೆಯಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ ಸಹಾಯಕ/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಇಂದು ಪ್ರಕಟಣೆ ಹೊರಡಿಸಿರುವ ಕೆಪಿಎಸ್‌ಸಿ, ದಿನಾಂಕ 23-01-2020ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊಂಡ ಮಾಹಿತಿ ಪ್ರಕಾರ ಜನವರಿ 24ರಂದು (ನಾಳೆ) ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ವರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜ.24ರಂದು ನಡೆಯಬೇಕಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದೆ.

Edited By : Vijay Kumar
PublicNext

PublicNext

23/01/2021 08:17 pm

Cinque Terre

96.02 K

Cinque Terre

11