ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್ಪಿಬಿ, ಡಾ.ಬಿ.ಎಂ.ಹೆಗ್ಡೆ, ಕಂಬಾರ ಸೇರಿ 7 ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ

ಹೊಸದಿಲ್ಲಿ: ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಈ ಬಾರಿ ಕರ್ನಾಟಕದ ಐವರಿಗೆ ವಿಶೇಷ ಗೌರವ ದಕ್ಕಿದೆ. ಕರ್ನಾಟಕದ

ಖ್ಯಾತ ವೈದ್ಯ ಬಿಎಂ ಹೆಗಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಇತ್ತೀಚೆಗೆ ನಿಧನರಾದ ಭಾರತದ ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಉಳಿದಂತೆ ಏಳು ಸಾಧಕರಿಗೆ ಪದ್ಮವಿಭೂಷಣ ಪ್ರಶಸ್ತಿ ದಕ್ಕಿದೆ.

ಕರ್ನಾಟಕದ ಖ್ಯಾತ ಲೇಖಕರಾದ ಚಂದ್ರಶೇಖರ ಕಂಬಾರ ಸೇರಿದಂತೆ 10 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. ಕರ್ನಾಟಕದ ಹಿರಿಯ ಜಾನಪದ ಕಲಾವಿದೆ ಬಿ ಮಂಜಮ್ಮ ಜೋಗತಿ, ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್, ಕ್ರೀಡಾಪಟು ಕೆವೈ ವೆಂಕಟೇಶ್‌ ಸೇರಿ 102 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ. ಜಪಾನ್‌ನ ಶಿಂಜೋ ಅಬೆಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ.

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್‌ ಗೊಗೊಯಿಗೆ (ಮರಣೋತ್ತರವಾಗಿ), ಲೋಕಸಭಾ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್‌, ರಾಮ್‌ ವಿಲಾಸ್‌ ಪಾಸ್ವಾನ್ (ಮರಣೋತ್ತರ) ಕೇಶೂಭಾಯಿ ಪಟೇಲ್‌ (ಮರಣೋತ್ತರ)ವಾಗಿ ಪದ್ಮಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ.

Edited By : Nagaraj Tulugeri
PublicNext

PublicNext

25/01/2021 10:20 pm

Cinque Terre

67.21 K

Cinque Terre

5

ಸಂಬಂಧಿತ ಸುದ್ದಿ