ನವದೆಹಲಿ: ಕೋವಿಡ್ ಸಂಕಷ್ಟದ ಕಾಲದಲ್ಲೂ ಕೇಂದ್ರ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕೃಷಿ ಸೆಸ್ ವಿಧಿಸಿದ್ದು, ಇಂಧನ ಮತ್ತಷ್ಟು ದುಬಾರಿಯಾಗಲಿದೆ.
ಪ್ರತಿ ಲೀಟರ್ ಡೀಸೆಲ್ ಮೇಲೆ 4 ರೂ., ಪೆಟ್ರೋಲ್ ಮೇಲೆ 2.5 ರೂ. ಕೃಷಿ ಸೆಸ್ ವಿಧಿಸಿರುವುದರಿಂದ ಇಂಧನ ಬೆಲೆ ದುಬಾರಿಯಾಗಲಿದೆ. ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರ ನೂರರ ಗಡಿಯಲ್ಲಿ ಬಂದು ನಿಂತಿದ್ದು, ಮತ್ತೆ ಸೆಸ್ ವಿಧಿಸಲಾಗಿರುವುದು ವಾಹನ ಸವಾರರಿಗೆ ಬಿಸಿ ತುಪ್ಪವಾಗಿದೆ. ಡೀಸೆಲ್, ಪೆಟ್ರೋಲ್ ಮೇಲೆ ಕೃಷಿ ಸೆಸ್ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.
ಈ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ನಿರ್ಮಲಾ ಸೀತಾರಾಮನ್, ''ಪೆಟ್ರೋಲ್, ಡೀಸೆಲ್ ಮೇಲೆ ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (ಎಐಡಿಸಿ) ಹೇರುವ ಪರಿಣಾಮವಾಗಿ ಮೂಲ ಅಬಕಾರಿ ಸುಂಕ (ಬಿಇಡಿ) ಮತ್ತು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್‌ಎಇಡಿ) ದರಗಳನ್ನು ಇಳಿಸಲಾಗಿದೆ. ಇದರಿಂದ ಗ್ರಾಹಕರಿಗೆ ಯಾವುದೇ ಹೆಚ್ಚುವರಿ ಹೊರೆ ಆಗುವುದಿಲ್ಲ'' ಎಂದು ಹೇಳಿದ್ದಾರೆ.
PublicNext
01/02/2021 02:12 pm