ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯುವ ಏರೋ ಇಂಡಿಯಾ ಶೋ 2021ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಈ ವೈಮಾನಿಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ 29 ವಿವಿಧ ದೇಶಗಳ ರಾಯಭಾರಿಗಳು ಭಾಗಿದ್ದರು.
ಏರೋ ಇಂಡಿಯಾ ಶೋಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ರಾಜನಾಥ ಸಿಂಗ್ ಅವರು, ಕೊರೊನಾ ಕಷ್ಟದ ಸಮಯದಲ್ಲಿ ಏರೋ ಶೋ ಆರಂಭವಾಗಿದೆ. ಏಷ್ಯಾದಲ್ಲೇ ಅತ್ಯಂತ ಅತಿ ದೊಡ್ಡ ಏರೋ ಶೋ ಆಯೋಜನೆ ಮಾಡಿರುವ ಬೆಂಗಳೂರಿಗೆ ಹಾಗೂ ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನೆ ಎಂದು ತಿಳಿಸಿದರು.
ಸಿಎಂ ಯಡಿಯೂರಪ್ಪ ಮಾತನಾಡಿ, ಮೂರು ದಿನಗಳ ಕಾಲ ನಡೆಯುವ ಏರೋ ಇಂಡಿಯಾ ಶೋದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. 540 ಪ್ರದರ್ಶಕರು, 77 ವಿದೇಶಿ ಪ್ರದರ್ಶಕರು ಭಾಗಿಯಾಗಲಿದ್ದಾರೆ. ಬೆಂಗಳೂರು ವಿದ್ಯಾಭ್ಯಾಸ, ಸ್ಟಾರ್ಟ್ ಅಪ್, ವಹಿವಾಟಿಗೆ ಅತ್ಯುತ್ತಮ ಸ್ಥಳವಾಗಿದೆ. 1 ಸಾವಿರ ಎಕರೆ ವಿಸ್ತೀರ್ಣದ ಏರೋಸ್ಪೇಸ್ ಪಾರ್ಕ್ ದೇವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.
PublicNext
03/02/2021 01:39 pm