ಬೆಂಗಳೂರು: ನಗರದ ಪ್ರತಿಷ್ಟಿತ ಮಂತ್ರಿಮಾಲ್ ಕಳೆದ ಮೂರು ವರ್ಷಗಳಿಂದ ಬರೋಬ್ಬರಿ 32 ಕೋಟಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿತ್ತು. ತೆರಿಗೆ ಪಾವತಿಗೆ ಕೊಟ್ಟ ಅವಧಿ ಮೀರಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ಮಂತ್ರಿ ಮಾಲ್ ಗೆ ಬೀಗ ಹಾಕಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಕಂದಾಯಾಧಿಕಾರಿ ಪ್ರಸನ್ನ ಕುಮಾರ್, ಕಳೆದ ಮೂರು ವರ್ಷಗಳಿಂದ ತೆರಿಗೆ ಕಟ್ಟದೆ 32 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಹಿಂದೆ ತೆರಿಗೆ ಪಾವತಿಸುವಂತೆ ಬಿಬಿಎಂಪಿ ನೋಟಿಸ್ ಜಾರಿಗೊಳಿಸಿತ್ತು. ಆದರೂ ಎಚ್ಚೆತ್ತುಕೊಳ್ಳದ ಮಾಲ್ ಮಾಲೀಕರ ವಿರುದ್ಧ ಕಾನೂನು ಕ್ರಮವಾಗಿ ನಿನ್ನೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೂ ಮಾಲ್‍ಗೆ ಬೀಗ ಹಾಕಿದ್ದೇವೆ ಎಂದರು.
ಮಂತ್ರಿ ಮಾಲ್ ಮಾಲೀಕರು ಆಸ್ತಿ ತೆರಿಗೆ ಪಾವತಿಗಾಗಿ 15 ದಿನ ಕಾಲಾವಕಾಶ ಕೇಳಿದ್ದರು. ಅದರಂತೆ ನೋಟಿಸ್ ನೀಡಿ 15 ದಿನಗಳು ಕಳೆದ ಕಾರಣ ಪಶ್ಚಿಮ ವಿಭಾಗದ ತೆರಿಗೆ ಅಧಿಕಾರಿಗಳು ಮಾಲ್ ಸಿಬ್ಬಂದಿಗಳನ್ನು ಹೊರಗೆ ಕರೆದು ಬೀಗ ಹಾಕಲಾಗಿದೆ. ಮಾರ್ಚ್ 1 ವರೆಗೆ ಅವಕಾಶವಿದ್ದು ತೆರಿಗೆ ಪಾವತಿಸದಿದ್ದಲ್ಲಿ ಹೋದರೆ ಬಿಬಿಎಂಪಿ ಮಾಲ್‍ನ್ನು ವಶಪಡಿಸಿಕೊಳ್ಳುವುದಾಗಿ ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.
PublicNext
25/02/2021 03:57 pm