ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂಧನ ಬೆಲೆ ಕಡಿಮೆ ಮಾಡುವಂತೆ ಆರ್​ಬಿಐ ಒತ್ತಾಯ

ನವದೆಹಲಿ: ಹೆಚ್ಚುತ್ತಿರುವ ಇಂಧನ ಬೆಲೆ ಏರಿಕೆ ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಿ ಕೆಲಸ ಮಾಡಬೇಕಿದೆ. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳುತ್ತವೆ ಎಂಬ ವಿಶ್ವಾಸ ಇದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ಸಂಬಂಧ ಮಾತನಾಡಿರುವ ಕೇಂದ್ರ ಬ್ಯಾಂಕ್​​ನ ಗವರ್ನರ್​​, ಕೋವಿಡ್​ ನಿಂದ ಆದ ಒತ್ತಡವನ್ನು ಕಡಿಮೆಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರೋಕ್ಷ ತೆರಿಗೆ ಹೆಚ್ಚಳ ಮಾಡಿವೆ. ಹೀಗಾಗಿ ಇಂಧನ ಬೆಲೆಯಲ್ಲಿ ನಿರಂತರ ಹೆಚ್ಚಳವಾಗುತ್ತಿದೆ. ಇದನ್ನು ಇಳಿಕೆ ಮಾಡಿ ಜನರ ಮೇಲಿನ ಬಾರ ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಗ್ಗೂಡಿ ಕ್ರಮ ಕೈಗೊಳ್ಳಬೇಕು ಎಂದು ಆರ್​ಬಿಐ ಗವರ್ನರ್​​ ಶಕ್ತಿಕಾಂತ್​ ದಾಸ್​ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

25/02/2021 04:39 pm

Cinque Terre

67.92 K

Cinque Terre

10