ನವದೆಹಲಿ : ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ.
ಬಿಹಾರ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಈ ಐದು ವಿಧಾನಸಭೆಗಳ ಚುನಾವಣೆಯನ್ನೂ ಯಶಸ್ವಿಯಾಗಿ ನಡೆಸುವ ಉಮೇದಿನಲ್ಲಿದೆ. ಏಪ್ರೀಲ್ - ಮೇ ನಲ್ಲಿ ಚುನಾವಣೆಗಳು ನಡೆಯಲಿವೆ ಎನ್ನಲಾಗುತ್ತಿದೆ.
ಇಂದು ಸಂಜೆ 4.30ಕ್ಕೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ಕರೆದಿದ್ದು ಈ ವೇಳೆ ಚುನಾವಣಾ ದಿನಾಂಕವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಕರ್ನಾಟಕಲ್ಲಿ ಒಂದು ಲೋಕಸಭೆ ಮತ್ತು ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಸಹ ಪ್ರಕಟಿಸುವ ನಿರೀಕ್ಷೆಯಿದೆ.
ಪಶ್ಚಿಮ ಬಂಗಾಳದಲ್ಲಿ 294, ತಮಿಳು ನಾಡಿನಲ್ಲಿ 234, ಕೇರಳದಲ್ಲಿ 140, ಅಸ್ಸಾಂನಲ್ಲಿ 126 ಮತ್ತು ಪುದುಚೆರಿಯ ಕೇಂದ್ರಾಡಳಿತ ಪ್ರದೇಶದ 30 ಕ್ಷೇತ್ರಗಳಿಗೆ ಚುನಾವಣೆ ಏರ್ಪಡಲಿದೆ.
PublicNext
26/02/2021 01:09 pm