ಬೆಂಗಳೂರು: ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಅಲ್ಲದೆ, ಮಂಜುನಾಥ್ ಪ್ರಸಾದ್ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಇ.ವಿ. ರಮಣ ರೆಡ್ಡಿ ಅವರನ್ನು ಕೈಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ ಕುಮಾರ್ ಕತ್ರಿ ಅವರನ್ನು ಕೃಷಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಜಾವೇದ್ ಅಖ್ತರ್ ಅವರನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದ್ದು, ಜೊತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ. ತುಷಾರ್ ಗಿರಿನಾಥ್ ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದ್ದು, ಜೊತೆಗೆ ವಿಪತ್ತು ನಿರ್ವಹಣೆ , ಭೂಮಿಯ ಹೆಚ್ಚುವರಿ ಹೊಣೆಯನ್ನು ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.
PublicNext
05/08/2021 09:19 pm