ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಬಿಸಿ ಮೀಸಲಾತಿ ಅಧಿಕಾ ರಾಜ್ಯಕ್ಕೆ ; ರಾಜ್ಯಸಭೆಯಲ್ಲೂ ಅನುಮೋದನೆ

ನವದೆಹಲಿ : ಸಂವಿಧಾನದ 127ನೇ ತಿದ್ದುಪಡಿ ಮಸೂದೆ ಇಂದು ರಾಜ್ಯಸಭೆಯಲ್ಲಿಯೂ 187 ಮತಗಳ ಬೆಂಬಲದೊಂದಿಗೆ ಅಂಗೀಕಾರವಾಗಿದೆ. ನಿನ್ನೆ ಲೋಕಸಭೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಿದ್ದ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಎರಡೂ ಸದನಗಳಲ್ಲಿ ಒಬಿಸಿ ಸೇರ್ಪಡೆಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆ ಅಂಗೀಕಾರವಾದಂತಾಗಿದೆ.

ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತ್ತು.

ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು. ಈ 127ನೇ ಸಂವಿಧಾನ ತಿದ್ದುಪಡಿ ಮಸೂದೆಯ ಬಗ್ಗೆ ನಿನ್ನೆ ಲೋಕಸಭಾ ಕಲಾಪದಲ್ಲಿ ಚರ್ಚೆಗಳು ನಡೆದಿದ್ದು, ಸರ್ವಾನುಮತದಿಂದ ಅಂಗೀಕಾರ ಮಾಡಲಾಗಿತ್ತು. ಇಂದು ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಿದ್ದು, ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಿವೆ.

ಮುಂಗಾರು ಅಧಿವೇಶನದಲ್ಲಿ ಒಬಿಸಿ ಮೀಸಲಾತಿಗೆ ಜಾತಿಗಳನ್ನು ಸೇರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೇ ನೀಡಬೇಕೆಂಬ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡುತ್ತಿದ್ದಂತೆ ಪಂಚಮಸಾಲಿ ಮಠಾಧೀಶರು ಹಾಗೂ ನಾಯಕರು ತಮ್ಮ ಜಾತಿಯನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂಬ ಮನವಿಯನ್ನು ಕರ್ನಾಟಕ ಸರ್ಕಾರದ ಮುಂದಿಡಲು ಸಿದ್ಧತೆ ನಡೆಸಿದ್ದಾರೆ.

Edited By : Nirmala Aralikatti
PublicNext

PublicNext

11/08/2021 10:06 pm

Cinque Terre

124.13 K

Cinque Terre

8

ಸಂಬಂಧಿತ ಸುದ್ದಿ