ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ : ವಿಧಾನ ಪರಿಷತ್ ನ 30 ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಒಂದೇ ಸ್ಥಳದಲ್ಲಿ ಬೀಡುಬಿಟ್ಟಿದ್ದ ಕರ್ನಾಟಕ ವಿಧಾನ ಪರಿಷತ್ ನ ಬರೋಬ್ಬರಿ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈ ಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ತಮ್ಮದೇ ಹಿಡಿತ ಹಾಗೂ ಪ್ರಭುತ್ವ ಸಾಧಿಸಿದ್ದ ಹಲವರನ್ನು ಬೇರೆಡೆಗೆ ವರ್ಗಾಯಿಸಿ ವಿಧಾನ ಪರಿಷತ್ ಕಾರ್ಯ ನಿರ್ವಹಣೆಯಲ್ಲಿ ಪಾರದರ್ಶಕತೆ ಹಾಗೂ ದಕ್ಷತೆ ಮೂಡಿಸುವಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ನಡೆಸುತ್ತಿರುವ ಭಾಗವೆಂಬ ಮಾತುಗಳು ಕೇಳಿಬಂದಿವೆ.

ಈ ಕುರಿತು ನಿನ್ನೆಯಷ್ಟೇ ಅಧಿಸೂಚನೆ ಹೊರಡಿಸಿದ್ದು ಉಪಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಶಾಖಾಧಿಕಾರಿಗಳು, ಹಿರಿಯ ಸಹಾಯಕರು, ಸಹಾಯಕರು ಮತ್ತು ಕಿರಿಯ ಸಹಾಯಕರನ್ನೊಳಗೊಂಡ 30 ಜನರನ್ನು ಬೇರೆ ಬೇರೆ ವಿಭಾಗಗಳಿಗೆ ವರ್ಗಾಯಿಸಲಾಗಿದೆ. ಸಿಬ್ಬಂದಿಯ ವರ್ಗಾವಣೆ ಕುರಿತು ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಅಧಿಕೃತ ಆದೇಶ ಪ್ರಕಟಿಸಿದ್ದಾರೆ.

Edited By : Nirmala Aralikatti
PublicNext

PublicNext

20/08/2021 08:55 pm

Cinque Terre

67.28 K

Cinque Terre

2

ಸಂಬಂಧಿತ ಸುದ್ದಿ