ಬೆಂಗಳೂರು: ಬಿಎಂಟಿಸಿ 33ನೇ ಘಟಕದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್ ಅವರನ್ನು ಕರ್ತವ್ಯದಿಂದ ವಜಾ ಮಾಡಲಾಗಿದೆ.
ಬಿಎಂಟಿಸಿ ದಕ್ಷಿಣ ವಿಭಾಗೀಯ ನಿಯಂತ್ರಣಾಧಿಕಾರಿ ಎಂ ಜಗದೀಶ್ ಈ ಆದೇಶ ಹೊರಡಿಸಿದ್ದಾರೆ. ಅನಧಿಕೃತವಾಗಿ ಸೇವೆಗೆ ಗೈರು ಹಾಜರಾಗಿದ್ದು, ಒಂದು ವರ್ಷದಲ್ಲಿ 300 ಕ್ಕೂ ಹೆಚ್ಚು ದಿನ ರಜೆ ಪಡೆದಿದ್ದು, ಕರ್ತವ್ಯಕ್ಕೆ ಬಾರದೇ ಸಹೋದ್ಯೋಗಿಗಳನ್ನು ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ಪ್ರಚೋದನೆ ನೀಡಿದ ಹಿನ್ನಲೆಯಲ್ಲಿ ಚಂದ್ರಶೇಖರ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.
ವರ್ಷದಲ್ಲಿ 300 ಕ್ಕೂ ಹೆಚ್ಚು ರಜೆ ಪಡೆದ ಬಗ್ಗೆ ಚಂದ್ರಶೇಖರ್ ವಿರುದ್ಧ ತನಿಖೆ ನಡೆಯುತ್ತಿದೆ.
PublicNext
24/08/2021 11:57 am