ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ನೌಕರರು ಮುಂಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತೆ ಕಡ್ಡಾಯ

ಬೆಂಗಳೂರು : ಮುಂದಿನ ವರ್ಷ ಮಾರ್ಚ್ 22ರ ಒಳಗಾಗಿ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗದ ಸರ್ಕಾರಿ ನೌಕರರು ಮುಂಬಡ್ತಿ ಪಡೆಯಲು ಅನರ್ಹರಾಗಿರುತ್ತಾರೆ. ರಾಜ್ಯ ಸರ್ಕಾರ ಈ ಬಗ್ಗೆ ಈಗಾಗಲೇ ಸುತ್ತೋಲೆ ಹೊರಡಿಸಿದೆ.

ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ಅಡಿಯಲ್ಲಿ ನಿರ್ದಿಷ್ಟ ಹುದ್ದೆ ಹೊರತುಪಡಿಸಿ ಇನ್ನಿತರ ಎಲ್ಲ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸರ್ಕಾರ ಈಗಾಗಲೇ ಹಲವು ಬಾರಿ ಕಾಲಮಿತಿಯನ್ನು ವಿಸ್ತರಿಸಲಾಗಿದ್ದರೂ ಅನೇಕ ನೌಕರರು ಈ ಬಗ್ಗೆ ನಿರ್ಲಕ್ಷ್ಯ ಹೊಂದಿರುವ ಹಿನ್ನೆಲೆಯಲ್ಲಿ 2022 ರ ಮಾರ್ಚ್ 22 ರೊಳಗೆ ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡುವಂತೆ ಸೂಚನೆ ನೀಡಿದೆ.

Edited By : Nagaraj Tulugeri
PublicNext

PublicNext

25/08/2021 04:36 pm

Cinque Terre

22.75 K

Cinque Terre

0

ಸಂಬಂಧಿತ ಸುದ್ದಿ