ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಅಭಿಮಾನಿಗಳು ನಿರ್ಮಿಸಿದ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಬಸವಣ್ಣ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳನ್ನು ಶೀಘ್ರದಲ್ಲೇ ತೆರವು ಮಾಡಲು ಬಿಬಿಎಂಪಿ ನಿರ್ಧರಿಸಿದೆ. ಸಿನಿ ಪ್ರೇಮಿಗಳು ತಮಗೆ ಇಷ್ಟವಾದ ನೆಚ್ಚಿನ ನಟರ ಸಂಘಗಳನ್ನು, ಬಳಗಗಳನ್ನು ಮಾಡಿಕೊಂಡು ಏರಿಯಾದಲ್ಲಿ ಪುತ್ಥಳಿಗಳನ್ನು ನಿರ್ಮಿಸಿರುತ್ತಾರೆ. ಅಂತವರ ಕನಸಿನ ಪುತ್ಥಳಿಯ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ.
ಅಭಿಮಾನಿಗಳು ಅನಧಿಕೃತವಾಗಿ ನಗರದಲ್ಲಿ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅವರು ಬಿಬಿಎಂಪಿಯಿಂದ ಅನುಮತಿ ಪಡೆಯದೇ ಪುತ್ಥಳಿ ಸ್ಥಾಪನೆ ಹಿನ್ನಲೆಯಲ್ಲಿ ಅಂತಹ ಪುತ್ಥಳಿಗಳನ್ನು ತೆರವುಗೊಳಿಸಲು ಬಿಬಿಎಂಪಿ ನಿರ್ಧರಿಸಿದ್ದು ಆದಷ್ಟು ಬೇಗ ತೆರವು ಕಾರ್ಯಾಚರಣೆ ಕೈಗೊಳ್ಳಲಿದೆ. ಈಗಾಗಲೇ ಈ ಬಗ್ಗೆ ಬಿಬಿಎಂಪಿ ಸರ್ವೆ ಕಾರ್ಯ ಶುರುಮಾಡಿದೆ. ಸರ್ವೆಯಲ್ಲಿ ಅನೇಕ ಪುತ್ಥಳಿಗಳನ್ನು ಗುರುತಿಸಿದ್ದು, ಇನ್ನೇನು ಶೀಘ್ರದಲ್ಲೇ ತೆರವು ಮಾಡಲು ತೀರ್ಮಾನಿಸಿದೆ.
PublicNext
01/09/2021 03:21 pm