ವಿಜಯನಗರ: ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸರಣಿ ಸಾವು ಸಂಭವಿಸಿದೆ. 20 ದಿನದಲ್ಲಿ 6 ಮಂದಿ ನೀರು ಸೇವನೆಯಿಂದ ಮೃತಪಟ್ಟಿದ್ದಾರೆ. ಇದೀಗ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನ ಘೋಷಣೆ ಮಾಡಿದೆ.
ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, "ಕಲುಷಿತ ನೀರು ಕುಡಿದು ಸಾವು ಪ್ರಕರಣ ದುಃಖದ ಸಂಗತಿಯಾಗಿದೆ. ಈ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ ನೀಡಲಾಗಿದೆ. ಪ್ರತಿ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು" ಎಂದು ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆಯಾದ ನೀರು ಸೇವಿಸಿ ಮೃತಪಟ್ಟಿದ್ದಾರೆ. ಇದರಿಂದ ಹೆದರಿ ಜನರು ಊರನ್ನೇ ತೊರೆದು ಹೊರಟಿದ್ದಾರೆ. ಗ್ರಾಮದಲ್ಲಿ ಸದ್ಯ ಸ್ಮಶಾನ ಮೌನ ಆವರಿಸಿದೆ. ಈಗಾಗಲೇ ಹಲವರ ಸ್ಥಿತಿ ಗಂಭೀರವಾಗಿದ್ದು ಅಧಿಕಾರಿಗಳು ಮಾತ್ರ ಬಂದಿಲ್ಲ, ಎಚ್ಚೆತ್ತುಕೊಂಡಿಲ್ಲ.
PublicNext
05/10/2021 02:50 pm