ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು ಹಾಗೂ ಕೊಡಗು ಜಿಲ್ಲಾಧಿಕಾರಿ ಅದಲು-ಬದಲು ವರ್ಗಾವಣೆ

ರಾಯಚೂರು: ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರನ್ನು ನೇಮಿಸಲಾಗಿದೆ. ವಿಶೇಷವೆಂದರೆ ಇಲ್ಲಿನ ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ ಸತೀಶ್ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಈಗ ರಾಯಚೂರು ಜಿಲ್ಲಾಧಿಕಾರಿಯಾಗಿ ನೇಮಕವಾಗಿರುವ ಚಾರುಲತಾ ಅವರು ಇದಕ್ಕೂ ಮುನ್ನ ಕೊಡಗು ಡಿ.ಸಿ ಆಗಿದ್ದರು. ಈ ಮೂಲಕ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಅದಲು-ಬದಲು ಮಾಡಿದಂತಾಗಿದೆ.

ಕೊಡಗು ಜಿಲ್ಲಾಧಿಕಾರಿಯಾಗುವ ಮುನ್ನ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಬಿ.ಸಿ ಸತೀಶ್ ಅವರನ್ನು ಕೇವಲ 2 ತಿಂಗಳು 17 ದಿನಗಳಲ್ಲಿ ವರ್ಗಾವಣೆ ಮಾಡಲಾಗಿತ್ತು.

Edited By : Nagaraj Tulugeri
PublicNext

PublicNext

12/10/2021 11:23 am

Cinque Terre

29.77 K

Cinque Terre

0