ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸಿಕೊಳ್ಳಲು ಭೂ ಪರಿವರ್ತನೆಗೆ ಇನ್ಮುಂದೆ ವರ್ಷಗಟ್ಟಲೆ ಕಾಯುವ ಅಗತ್ಯವಿಲ್ಲ. ಮೂರು ದಿನಗಳ ಒಳಗಾಗಿ ಅರ್ಜಿದಾರರಿಗೆ ಭೂ ಪರಿವರ್ತನೆ ಮಾಡಿಸಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಲಿದೆ.
ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ನೇರವಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇದರ ಜವಾಬ್ದಾರಿ ನೀಡಲಾಗಿದೆ. ಕೈಗಾರಿಕೆ, ವಸತಿ, ವಾಣಿಜ್ಯ ಮೊದಲಾದ ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಳ್ಳಬೇಕಿತ್ತು. ಇದು ಸುಲಭದ ಮಾತಲ್ಲ. ಇದಕ್ಕಾಗಿ ವರ್ಷಗಟ್ಟಲೇ ಅಲೆಯುವುದನ್ನು ತಪ್ಪಿಸಲು ಸರಳ ದಾಖಲೆಗಳೊಂದಿಗೆ ಮೂರು ದಿನದೊಳಗೆ ಭೂಪರಿವರ್ತನೆ ಮಾಡಿಕೊಡುವ ವ್ಯವಸ್ಥೆ ಜಾರಿ ತರಲಾಗುತ್ತಿದೆ ಎಂಬ ಮಾಹಿತಿ ಇದೆ.
PublicNext
18/10/2021 03:24 pm