ಶ್ರೀನಗರ : ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಪ್ರತಿದಾಳಿ ನಡೆಸಿದ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ.
ಸೇನೆಗೆ ಬಲಿಯಾದ ಉಗ್ರನ ಬಳಿ ಇದ್ದ ಪಿಸ್ತೂಲ್, ಮ್ಯಾಗಜೀನ್, ಹ್ಯಾಂಡ್ ಗ್ರೇನೆಡ್ ಮತ್ತಿತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತನಾದ ಉಗ್ರ ಕುಲ್ಗಾಮ್ ಜಿಲ್ಲೆಯ ಜಾವೇದ್ ವಾನಿ ಎಂದು ಗುರುತಿಸಲಾಗಿದೆ. ಈತ ಹೈಬ್ರಿಡ್ ಮಾದರಿಯ ಉಗ್ರನಾಗಿದ್ದ ಎಂದು ಐಜಿಪಿ ವಿಜಯ ಕುಮಾರ್ ತಿಳಿಸಿದ್ದಾರೆ.
PublicNext
28/10/2021 12:41 pm