ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ನು 3 ವರ್ಷ ಶಕ್ತಿಕಾಂತ ದಾಸ್ RBI ಗವರ್ನರ್

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ಮರು ನೇಮಕ ಮಾಡಲಾಗಿದೆ. ಶುಕ್ರವಾರ ಸರ್ಕಾರ 2021 ರ ಡಿಸೆಂಬರ್ 10 ರಿಂದ ಮೂರು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಶಕ್ತಿಕಾಂತ ದಾಸ್ ಅವರು ಆರ್.ಬಿ.ಐ. ಗವರ್ನರ್ ಆಗಿ ಮುಂದುವರೆಯಲಿದ್ದಾರೆ ಎಂದು ಎಂದು ಅಧಿಕೃತ ಹೇಳಿಕೆ ಬಿಡುಗಡೆ ಮಾಡಲಾಗಿದೆ.

ಶಕ್ತಿಕಾಂತ್ ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿದ್ದರು. ಡಿಸೆಂಬರ್ 11, 2018 ರಂದು ಮೂರು ವರ್ಷಗಳ ಕಾಲ ರಿಸರ್ವ್ ಬ್ಯಾಂಕ್ ಮುಖ್ಯಸ್ಥರಾಗಿ ನೇಮಕಗೊಂಡರು.

ಶಕ್ತಿಕಾಂತ್ ದಾಸ್ ಅವರು ಆಡಳಿತದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಅನುಭವವನ್ನು ಹೊಂದಿದ್ದಾರೆ. ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ ಅವರ ಸುದೀರ್ಘ ಅಧಿಕಾರಾವಧಿಯಲ್ಲಿ, ಅವರು 8 ಕೇಂದ್ರ ಬಜೆಟ್ ಗಳ ತಯಾರಿಕೆಯಲ್ಲಿ ನೇರವಾಗಿ ಸಂಬಂಧ ಹೊಂದಿದ್ದರು.

Edited By : Nirmala Aralikatti
PublicNext

PublicNext

29/10/2021 09:49 am

Cinque Terre

32.36 K

Cinque Terre

1

ಸಂಬಂಧಿತ ಸುದ್ದಿ