ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಹಬ್ಬದ ಆಚರಣೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿದೆ.
ದೀಪಾವಳಿಗೆ ಆಚರಣೆಗೆ ಮಾರ್ಗಸೂಚಿ:
* ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ.
* ನವೆಂಬರ್ 1ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು.
* ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಕನ್ನಡ ರಾಜ್ಯೋತ್ಸವ ಆಚರಣೆ:
* ಕನ್ನಡ ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು.
* ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗುವುದು. ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ.
PublicNext
30/10/2021 03:37 pm