ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಣಿವೆ ರಾಜ್ಯದಲ್ಲಿ ಸ್ಪೋಟ: ಇಬ್ಬರು ಯೋಧರು ಹುತಾತ್ಮ, ಮತ್ತೊಬ್ಬರಿಗೆ ಗಾಯ

ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಮ್ಮದಿ ಕದಡುವ ಸಂದರ್ಭಗಳು ಹೆಚ್ಚುತ್ತಿವೆ.ಸದ್ಯ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್ ಒಸಿ) ಬಳಿ ಗಣಿ ಸ್ಫೋಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಅಧಿಕಾರಿ ಮತ್ತು ಯೋಧ ಶನಿವಾರ ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ಯೋಧ ಕೂಡ ಗಾಯಗೊಂಡಿದ್ದಾರೆ.

ನೌಶೇರಾ ಸೆಕ್ಟರ್ ನ ಕಲಾಲ್ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಇಬ್ಬರು ಸೇನಾ ಸಿಬ್ಬಂದಿಯನ್ನು ಲೆಫ್ಟಿನೆಂಟ್ ರಿಷಿ ಕುಮಾರ್ ಮತ್ತು ಸಿಪಾಯ್ ಮಂಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಸ್ಫೋಟಗೊಂಡ ತಕ್ಷಣ ಅವರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗಿಲ್ಲ. ಗಾಯಗೊಂಡಿರುವ ಇನ್ನೋರ್ವ ಯೋಧ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : Nirmala Aralikatti
PublicNext

PublicNext

31/10/2021 10:03 am

Cinque Terre

61.71 K

Cinque Terre

0

ಸಂಬಂಧಿತ ಸುದ್ದಿ