ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಸೋಮವಾರ ಸಂಜೆ 6ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ನೀಡಲಾಗುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಾಳೆ ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಚಿವ ಸುನೀಲ್ ಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈಗಾಗಲೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿವರ್ಷ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 66 ವಿವಿಧ ವಲಯದ ಸಾಧಕರಿಗೆ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ ರಾಷ್ಟ್ರಾಧ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿರುವ ಹೊತ್ತಿನಲ್ಲಿಯೇ 10 ಸಂಸ್ಥೆಗಳಿಗೆ 2021ರ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

Edited By : Nagaraj Tulugeri
PublicNext

PublicNext

31/10/2021 08:59 pm

Cinque Terre

48.03 K

Cinque Terre

0

ಸಂಬಂಧಿತ ಸುದ್ದಿ