ನವದೆಹಲಿ: ನವೆಂಬರ್ 8ರಿಂದ ಅನ್ವಯವಾಗುವಂತೆ ಎಲ್ಲಾ ಹಂತದ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಸೋಮವಾರ ತೀರ್ಮಾನಿಸಿದೆ.
ಬಯೋಮೆಟ್ರಿಕ್ ಯಂತ್ರಗಳ ಪಕ್ಕದಲ್ಲಿ ಸ್ಯಾನಿಟೈಸರ್‌ಗಳನ್ನು ಕಡ್ಡಾಯವಾಗಿ ಇರಿಸಲಾಗುತ್ತದೆ ಮತ್ತು ಬಯೋಮೆಟ್ರಿಕ್ ಹಾಜರಾತಿ ಮಾಡುವ ಮೊದಲು ಮತ್ತು ನಂತರ ಎಲ್ಲಾ ಉದ್ಯೋಗಿಗಳು ತಮ್ಮ ಕೈಗಳನ್ನು ಸ್ಯಾನಿಟೈಸರ್ ನಿಂದ ಶುಚಿಗೊಳಿಸಿದ್ದಾರೆಯೇ ಎಂದು ಖಚಿತಪಡಿಸಿಕೊಳ್ಳುವುದು ಇಲಾಖೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನೌಕರರಿಗೆ ಈ ಹಿಂದೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು.
PublicNext
02/11/2021 01:22 pm